
ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ 3-0 ಅಂತರದಿಂದ ಸೋತಿದ್ದ ಟೀಮ್ ಇಂಡಿಯಾ, ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ 3-1 ಅಂತರದಿಂದ ಸೋಲನುಭವಿಸಿದೆ. ಈ ಸೋಲುಗಳಿಂದಾಗಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಮೂರನೇ ಬಾರಿ ಫೈನಲ್ಗೇರುವ ಅವಕಾಶವನ್ನು ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿತು. ಈ ಸೋಲುಗಳನ್ನು ಇದೀಗ ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ.
ಭಾರತ ತಂಡದಲ್ಲಿ ಎಲ್ಲವೂ ಸರಿಯಿಲ್ಲವೇ? ಈ ಪ್ರಶ್ನೆ ಮತ್ತೆ ಮುನ್ನಲೆಗೆ ಬಂದಿದೆ. ಅದು ಕೂಡ ಬಿಸಿಸಿಐ ಪರಿಶೀಲನಾ ಸಭೆಯ ಬಳಿಕ. ಬಾರ್ಡರ್ ಗವಾಸ್ಕರ್ ಸರಣಿಯಲ್ಲಿನ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲು ಜನವರಿ 11 ರಂದು ಬಿಸಿಸಿಐ ಪರಿಶೀಲನಾ ಸಭೆ ನಡೆಸಿತ್ತು. ಈ ಸಭೆಯಲ್ಲಿ ಟೀಮ್ ಇಂಡಿಯಾದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಮತ್ತು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಭಾಗವಹಿಸಿದ್ದರು
ಈ ಸಭೆಯಲ್ಲಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಇದೇ ವೇಳೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಿರಿಯ ಆಟಗಾರರ ನಡೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.