Breaking
Fri. Mar 14th, 2025

ಮಂಗಳೂರು: ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು..!

ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ..

ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಾಲಕೃಷ್ಣ, ಅಂಜನಪ್ಪ, ನಿತಿನ್ ಎಂಬುವವರಿಗೆ ಗಾಯಗಳಾಗಿದ್ದು, ಗಾಯಗೊಂಡ ಪೊಲೀಸರು ಹಾಗೂ ಆರೋಪಿಗಳನ್ನು ಮಂಗಳೂರು ಸಮೀಪದ ದೇರಳಕಟ್ಟೆಯಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ.

Related Post

Leave a Reply

Your email address will not be published. Required fields are marked *